ರಾಜ್ಯ ಸರಕಾರಿ ನೌಕರರ ಸಂಘದಿಂದ ಮಹತ್ವದ ಸಭೆ!!!
ರಾಜ್ಯದ ಎಲ್ಲ ಪದಾಧಿಕಾರಿಗಳು ಪಾಲ್ಗೊಳ್ಳಿ ನಿಮ್ಮ ಅಭಿಪ್ರಾಯ ತಿಳಿಸಿ…
ಸಭೆ ಯಾವಾಗ ?ಯಾವೆಲ್ಲ ವಿಷಯಗಳು ಚರ್ಚೆಯಲ್ಲಿವೆ?
ಕಡ್ಡಾಯವಾಗಿ ಪಾಲ್ಗೊಳ್ಳಿ…
ಬೆಂಗಳೂರು: ಕರ್ನಾಟಕ ರಾಜ್ಯ 7ನೇ ವೇತನ ಆಯೋಗವು ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆಯ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ಮೂರು ತಿಂಗಳಾಗಿದ್ದರು ಅನುಷ್ಠಾನ ವಿಳಂಬವಾಗುತ್ತಿರುವುದರಿಂದ ಹಾಗೂ ಹಳೆ ಪಿಂಚಣಿ ಯೋಜನೆ ಜಾರಿ ಕುರಿತು ಮುಂದಿನ ರೂಪುರೇಷೆಗಳ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲು ದಿನಾಂಕ: 07-07-2024 ರಂದು ಭಾನುವಾರ ಬೆಳಿಗ್ಗೆ 10-30 ಗಂಟೆಗೆ ಪೈ ಕಲ್ಯಾಣ ಮಂಟಪ, ಬೇಲೂರು ರಸ್ತೆ, ಚಿಕ್ಕಮಗಳೂರು ಇಲ್ಲಿ ರಾಜ್ಯ, ಜಿಲ್ಲೆ, ತಾಲೂಕು ಹಾಗೂ ಯೋಜನ ಶಾಖೆಯ ಪದಾಧಿಕಾರಿಗಳ ಸಭೆಯನ್ನು ಆಯೋಜಿಸಲಾಗಿದೆ.
ಈ ಸಭೆಯು ರಾಜ್ಯ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಗಳನ್ನು ಈಡೇರಿಸಿಕೊಳ್ಳುವ ಭಾಗವಾಗಿ ನಿರ್ಣಯ ಕೈಗೊಳ್ಳುವ ಅತ್ಯಂತ ಮಹತ್ವದ ಸಭೆಯಾಗಿರುವುದರಿಂದ ಎಲ್ಲಾ ಪದಾಧಿಕಾರಿಗಳು ಕಡ್ಡಾಯವಾಗಿ ಹಾಜರಾಗಿ ಯಶಸ್ವಿಗೊಳಿಸಲು ಕೋರಿದೆ.