11ನೇ ತರಗತಿ ವಿದ್ಯಾರ್ಥಿನಿ ಕಾಲೇಜಿನ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ..ಈ ಘಟನೆ ಕಾರಣ!!!!
ಕೋಲಾರ : ಕಳೆದ ವರ್ಷ ಡಿಸೇಂಬರ್ ಅಲ್ಲಿ ಕಲಬುರ್ಗಿಯಲ್ಲಿ ಹಾಸ್ಟೆಲ್ ಒಂದರಲ್ಲಿ ಅಪ್ರಾಪ್ತ ಬಾಲಕಿ ಒಬ್ಬಳು ಮಗುವಿಗೆ ಜನ್ಮ ನೀಡಿದ ಪ್ರಕರಣ ನಡೆದಿತ್ತು. ಇದೀಗ ಕೋಲಾರದಲ್ಲಿ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿನಿ ಒಬ್ಬಳು ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿರುವ ಘಟನೆ ಬೆಳಕಿಗೆ ಬಂದಿದೆ.
ಹೌದು, ಕೋಲಾರ ಹೊರ ವಲಯದ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕಾಲೇಜಿನ ಶೌಚಾಲಯದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.
ಸದ್ಯ ವಿದ್ಯಾರ್ಥಿಯನ್ನು ಸಹ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಕೋಲಾರ ಮಹಿಳಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ಇದಕ್ಕೆ ಕಾರಣನಾದ ವ್ಯಕ್ತಿಯ ಹುಡುಕಾಟ ನಡೆಸಿದ್ದಾರೆ.