ಸಂಪುಟ ಸಭೆಯ ನಿರ್ಣಯಗಳು: ಬಾಗಲಕೋಟೆ ಸಕ್ಕರೆ ಕಾರ್ಖಾನೆ ಖಾಸಗಿ ಗುತ್ತಿಗೆ, ಸಬ್ ರಿಜಿಸ್ಟ್ರಾರ್ಗಳ ವರ್ಗಾವಣೆ
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಹಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾದ ಹಲವು ನಿರ್ಧಾರಗಳ ಬಗ್ಗೆ ಸಚಿವ ಹೆಚ್ಕೆ ಪಾಟೀಲ್ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಸರ್ಕಾರಿ ನೌಕರರ ವರ್ಗಾವಣೆಗೆ ಮಾರ್ಗಸೂಚಿ ಹೊರಡಿಸಲಾಗಿತ್ತು. ಗೈಡ್ಲೈನ್ಸ್ಗಳಿಗೆ ಸಂಪುಟ ಸಭೆಯಲ್ಲಿ ಘಟನೋತ್ತರ ಅನುಮೋದಿಸಲಾಗಿದೆ ಎಂದಿದ್ದಾರೆ.
ನೋಂದಣಿ ಇಲಾಖೆಯಲ್ಲಿ ವರ್ಗಾವಣೆ ಪಾರದರ್ಶಕ ಮಾಡಲು ಕೌನ್ಸೆಲಿಂಗ್ ಪದ್ದತಿಯನ್ನು ಜಾರಿಗೆ ತರುತ್ತಿದ್ದೇವೆ. ಎಫ್.ಡಿಎ ಹೊರತುಪಡಿಸಿ ಸಬ್ ರಿಜಿಸ್ಟ್ರಾರ್ಗಳಿಗೆ ವರ್ಗಾವಣೆ ಆಗಲಿದೆ. ಕಾರ್ಪೋರೇಷನ್ ಏರಿಯಾದಲ್ಲಿ ಇರುವ ಸಬ್ ರಿಜಿಸ್ಟ್ರಾರ್ಗಳಿಗೆ ವರ್ಗಾವಣೆ ಕೌನ್ಸೆಲಿಂಗ್ ಅನ್ನು ಇಲಾಖೆಯೇ ನೋಡಿಕೊಳ್ಳಲಿದೆ. ಆ ಮೂಲಕ ಪಾರದರ್ಶಕತೆ ತರಲು ಇದರಿಂದ ಸಾಧ್ಯವಾಗುತ್ತದೆ. ಶೋಷಣೆ ಮುಕ್ತ ವ್ಯವಸ್ಥೆ ರೂಪುಗೊಳ್ಳಲು ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ ಎಂದರು.
ಸಂಪುಟ ಸಭೆಯ ನಿರ್ಣಯಗಳು: ಬಾಗಲಕೋಟೆ ಸಕ್ಕರೆ ಕಾರ್ಖಾನೆ ಖಾಸಗಿ ಗುತ್ತಿಗೆ, ಸಬ್ ರಿಜಿಸ್ಟ್ರಾರ್ಗಳ ವರ್ಗಾವಣೆ
ಬೆಂಗಳೂರು, ಜುಲೈ 04: ಇಂದು ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ (cabinet meeting) ಇದೀಗ ಅಂತ್ಯವಾಗಿದೆ. ಸಭೆಯಲ್ಲಿ ಹಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ಮಾಡಲಾಗಿದ್ದು, ಕೆಲ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ ಸಚಿವ ಹೆಚ್.ಕೆ.ಪಾಟೀಲ್ ಮಾಧ್ಯಮದವರೊಂದಿಗಿ ಮಾತನಾಡಿದ್ದು, ಹಿಂದುಳಿದ ವರ್ಗಗಳ ಇಲಾಖೆಯಡಿ ಭಕ್ತವತ್ಸಲ ವರದಿಯನ್ನು ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಧರಿಸಿದೆ. ಸರ್ಕಾರಿ ನೌಕರರ ವರ್ಗಾವಣೆಗೆ ಮಾರ್ಗಸೂಚಿ ಹೊರಡಿಸಲಾಗಿತ್ತು. ಗೈಡ್ಲೈನ್ಸ್ಗಳಿಗೆ ಸಂಪುಟ ಸಭೆಯಲ್ಲಿ ಘಟನೋತ್ತರ ಅನುಮೋದನೆ ಮಾಡಲಾಗಿದೆ ಎಂದು ತಿಳಿಸಿದರು.
ಒಳನಾಡು ಕೆರೆ, ಜಲಾಶಯಗಳಲ್ಲಿ ಮೀನು ಸಾಕಣೆಗೆ ಟೆಂಡರ್ ಟೆಂಡರ್ ಮುಂದುವರಿಕೆಗೆ ಡಿಸಿಗಳಿಗೆ ಹೊಣೆ ನೀಡಲಾಗಿದೆ. 100 ಹಾಸಿಗೆಗಳ ಸಾಮರ್ಥ್ಯದ 7 ತಾಲೂಕು ಆಸ್ಪತ್ರೆಗಳ ಕಟ್ಟಡ ನಿರ್ಮಾಣಕ್ಕೆ 256 ಕೋಟಿ ರೂ. ಅಂದಾಜು ಮೊತ್ತ, 15 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮೇಲ್ದರ್ಜೆಗೆ ಏರಿಸಲು ಅಸ್ತು ನೀಡಲಾಗಿದೆ. ಕೆಇಎ ಕಟ್ಟಡ ಮೇಲ್ದರ್ಜೆಗೇರಿಸಲು 30 ಕೋಟಿ ರೂ. ಅನುಮೋದಿಸಲಾಗಿದೆ. ಕಾನೂನು ಮತ್ತು ನೀತಿಗೆ (ಹೊಸ ಕಾನೂನು ನೀತಿ), ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘಕ್ಕೆ 20 ಗುಂಟೆ ಜಾಗ ಮಂಜೂರಿಗೆ ಒಪ್ಪಿಗೆ ನೀಡಲಾಗಿದೆ.
ಕೌನ್ಸೆಲಿಂಗ್ ಮೂಲಕ ಸಬ್ರಿಜಿಸ್ಟ್ರಾರ್ ವರ್ಗಾವಣೆ ಬಗ್ಗೆ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಇದುವರೆಗೂ ನೇರವಾಗಿ ಸಬ್ ರಿಜಿಸ್ಟ್ರಾರ್ ವರ್ಗಾವಣೆ ಮಾಡಲಾಗುತ್ತಿತ್ತು. ಈಗಿನಿಂದಲೇ ಕೌನ್ಸೆಲಿಂಗ್ ಮೂಲಕ ವರ್ಗಾವಣೆಗೆ ಸರ್ಕಾರ ನಿರ್ಧರಿಸಿದೆ. ಆ ಮೂಲಕ ಅಕ್ರಮ ಹಾಗೂ ಭ್ರಷ್ಟಾಚಾರ ತಡೆಗಟ್ಟಲು ವರ್ಗಾವಣೆಗೆ ಹೊಸ ನೀತಿ ಜಾರಿ ಮಾಡಲಾಗಿದೆ. ಈ ವರ್ಷದಿಂದಲೇ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.
ಸಬ್ರಿಜಿಸ್ಟ್ರಾರ್ ಹಂತಕ್ಕಿಂತ ಕೆಳ ಅಧಿಕಾರಿಗಳ ವರ್ಗಾವಣೆಗೂ ಕೌನ್ಸೆಲಿಂಗ್ ಮಾಡಲಾಗುವುದು. ಬೆಂಗಳೂರಿನಲ್ಲಿ 5 ವರ್ಷಕ್ಕಿಂತ ಹೆಚ್ಚು ಅವಧಿ ಕೆಲಸ ಮಾಡಿದರೆ ಹೊರ ಜಿಲ್ಲೆಗಳಿಗೆ ವರ್ಗಾವಣೆ ಮಾಡಲು ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.
ಬಾಗಲಕೋಟೆ ರನ್ನ ಸಕ್ಕರೆ ಕಾರ್ಖಾನೆ ಖಾಸಗಿ ಗುತ್ತಿಗೆಗೆ ಒಪ್ಪಿಗೆ, ಇಂದಿರಾ ಕ್ಯಾಂಟೀನ್ ಕಿಚನ್ಗಳಿಗೆ ಅಡುಗೆ ಉಪಕರಣ ಖರೀದಿಗೆ 84.58 ಕೋಟಿ ರೂ. ಅನುಮೋದನೆ ನೀಡಲಾಗಿದೆ. ಪಂಚಾಯತ್ ರಾಜ್ ಇಲಾಖೆ ಅಡಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆಗೆ ಅನುಮೋದನೆ ನೀಡಿದ್ದೇವೆ ಎಂದರು.
ನೋಂದಣಿ ಇಲಾಖೆಯಲ್ಲಿ ವರ್ಗಾವಣೆ ಪಾರದರ್ಶಕ ಮಾಡಲು ಕೌನ್ಸೆಲಿಂಗ್ ಪದ್ದತಿಯನ್ನು ಜಾರಿಗೆ ತರುತ್ತಿದ್ದೇವೆ. ಎಫ್.ಡಿಎ ಹೊರತುಪಡಿಸಿ ಸಬ್ ರಿಜಿಸ್ಟ್ರಾರ್ಗಳಿಗೆ ವರ್ಗಾವಣೆ ಆಗಲಿದೆ. ಕಾರ್ಪೋರೇಷನ್ ಏರಿಯಾದಲ್ಲಿ ಇರುವ ಸಬ್ ರಿಜಿಸ್ಟ್ರಾರ್ಗಳಿಗೆ ವರ್ಗಾವಣೆ ಕೌನ್ಸೆಲಿಂಗ್ ಅನ್ನು ಇಲಾಖೆಯೇ ನೋಡಿಕೊಳ್ಳಲಿದೆ. ಆ ಮೂಲಕ ಪಾರದರ್ಶಕತೆ ತರಲು ಇದರಿಂದ ಸಾಧ್ಯವಾಗುತ್ತದೆ. ಶೋಷಣೆ ಮುಕ್ತ ವ್ಯವಸ್ಥೆ ರೂಪುಗೊಳ್ಳಲು ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.
ಗಣಿಗಾರಿಕೆ ಪರಿಣಾಮ ಬೀರುವ ವಲಯದಲ್ಲಿ ಸಮಗ್ರ ಪರಿಸರ ಅಭಿವೃದ್ಧಿ ಯೋಜನೆಗೆ ನೋಡಲ್ ಏಜೆನ್ಸಿ ನೇಮಕಕ್ಕೆ ಕ್ಯಾಬಿನೆಟ್ ಅನುಮೋದಿಸಿದೆ. ಮಾಜಿ ಶಾಸಕ ವಿಎಸ್ ಪಾಟೀಲ್ಗೆ ಜಿ ಕ್ಯಾಟಗರಿ ಸೈಟ್ ನೀಡಿಕೆಗೆ ಶುದ್ದ ಕ್ರಯ ಪತ್ರ ನೀಡಲು ಕ್ಯಾಬಿನೆಟ್ ಅನುಮೋದಿಸಿದೆ.