ವಿದ್ಯಾರ್ಥಿ ಕೈ ನಿಂದ ಶೌಚಾಲಯ ಸ್ವಚ್ಚಗೊಳಿಸಿದ ದೈಹಿಕ ಶಿಕ್ಷಕ..
ಸರ್ಕಾರದ ಆದೇಶವಿದ್ದರೂ!!!
ಈ ಹಿಂದೆ ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲಿ ಇಂತಹ ಪ್ರಕರಣ ನಡೆದಿತ್ತು…
ಉಡುಪಿ: ಉಡುಪಿಯ ನಿಟ್ಟೂರು ಅನುದಾನಿತ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕ ವಿದ್ಯಾರ್ಥಿಯಿಂದ ಶೌಚಾಲಯ ಸ್ವಚ್ಛಗೊಳಿಸಿದ್ದಾರೆ. ವಿದ್ಯಾರ್ಥಿ ಶೌಚಾಲಯ ಸ್ವಚ್ಛ ಮಾಡುವ ದೃಶ್ಯ ಜಾಲತಾಣದಲ್ಲಿ ವೈರಲ್ ಆಗಿದೆ. ವಿದ್ಯಾರ್ಥಿ ಪೊರಕೆ ಶೌಚಾಯಲ ಹಿಡಿದು ಸ್ವಚ್ಛ ಮಾಡುತ್ತಿದ್ದು, ದೈಹಿಕ ಶಿಕ್ಷಕ ನೀರು ಹಾಕುತ್ತಿದ್ದಾರೆ.ಈ ಶಿಕ್ಷಕರ ವಿರುದ್ಧ ಕೂಡ ಶಿಕ್ಷಣ ಇಲಾಖೆ ಯಾವ ಕ್ರಮ ಕೈಗೊಳ್ಖುತ್ತತೆ ಎಂಬುದನ್ನು ಕಾದು ನೊಡೊಣ..
ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ತವರು ಕ್ಷೇತ್ರ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಗುಡ್ಡದ ನೇರಳೆಕೆರೆ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛ ಮಾಡಿಸಲಾಗಿತ್ತು. ಈ ಸಂಬಂಧ ವಿಡಿಯೋ ವೈರಲ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆ ಮುಖ್ಯಗುರುಗಳನ್ನು ಸಸ್ಪೆಂಡ್ ಮಾಡಲಾಗಿದೆ.
ಇದಾದ ನಂತರ ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಶಾಲೆಯೊಂದರಲ್ಲೂ ಸಹ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಲಾಗಿತ್ತು. ಈ ಸಂಬಂಧ ತಪ್ಪಿಸ್ಥರನ್ನು ಅಮಾನತು ಮಾಡಲಾಗಿತ್ತು. ಅಲ್ಲದೇ ಪ್ರಕರಣ ಸಹ ದಾಖಲಾಗಿತ್ತು.