ತುರ್ತು ಸಂದೇಶ:ನಿರಂತರವಾಗಿ ಸುರಿಯುತ್ತಿರುವ ನಾಳೆ(ಶನಿವಾರ)ಈ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ…
ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಶನಿವಾರ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಹಲವೆಡೆ ಮಳೆಯಿಂದಾಗಿ ಸಾಕಷ್ಟು ಅವಾಂತರ ಸೃಷ್ಟಿಯಾಗಿವೆ. ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಶನಿವಾರ ಜಿಲ್ಲೆಯ ನಾಲ್ಕು ತಾಲೂಕಿನಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಶಾಲಾ- ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಆದೇಶ ಹೊರಡಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಿಂದ 35 ಜನರ ಎರಡು NDRF ತಂಡ ಸಹ ಉತ್ತರ ಕನ್ನಡ ಜಿಲ್ಲೆಗೆ ಬಂದಿದೆ. ಜಿಲ್ಲೆಯಲ್ಲಿ 439 ಪ್ರದೇಶಗಳಲ್ಲಿ ಗುಡ್ಡ ಕುಸಿತವಾಗಿದೆ. ಪ್ರವಾಹವನ್ನು ಎದುರಿಸಲು ಕಂದಾಯ ಇಲಾಖೆಯ ತಂಡ ತಯಾರಾಗಿದೆ.
ಕಳೆದ ನಾಲ್ಕೈದು ದಿನಗಳಿಂದ ಒಳನಾಡು ಸೇರಿ ಮಲೆನಾಡು, ಕರಾವಳಿಯಲ್ಲಿ ಮಳೆ ಅಬ್ಬರಿಸುತ್ತಿದೆ. ಶುಕ್ರವಾರ ಕೂಡ ಹಲವೆಡೆ ಮಳೆಯಾಗಿದೆ. ಧಾರವಾಡದಲ್ಲಿ ಕಳೆದ ಅರ್ಧ ಗಂಟೆಗೂ ಹೆಚ್ಚು ಸಮಯ ಮಳೆಯಾಗಿದೆ. ಇತ್ತ ಕೊಡಗಿನಲ್ಲಿ ಮತ್ತೆ ಮಳೆ ಅಬ್ಬರ ಮುಂದುವರೆದಿದೆ.