ನಾಳೆಯೂ ಈ ಜಿಲ್ಲೆಯ ಐದು ತಾಲೂಕಿನ ಶಾಲಾ_ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ ಮಾಡಿದ್ರು ಜಿಲ್ಲಾಧಿಕಾರಿ…
ಮುಂಜಾಗೃತ ಕ್ರಮವಾಗಿ ಸೋಮವಾರ ಶಾಲೆಗಳಿಗೆ ರಜೆ….
ಉತ್ತರ ಕನ್ನಡ: ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸೋಮವಾರ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಜಿಲ್ಲೆಯ 5 ತಾಲೂಕಿನ ಶಾಲೆ (School)ಗಳಿಗೆ ನಾಳೆಯೂ ರಜೆ ಘೋಷಣೆ ಮಾಡಿ (Uttara Kannada) ಜಿಲ್ಲಾಧಿಕಾರಿ ಲಕ್ಷ್ಮಪ್ರಿಯಾ ಆದೇಶ ಹೊರಡಿಸಿದ್ದಾರೆ.
ಮಳೆ(Rain)ಯ ಆರ್ಭಟ ಮುಂದುವರಿದ ಹಿನ್ನೆಲೆ ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ ಮತ್ತು ಹೊನ್ನಾವರ ತಾಲೂಕಿನ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ನಿರಂತರ ಮಳೆಯಿಂದ ಕುಮಟಾ ತಾಲೂಕಿನ ಕೋಟೆಗುಡ್ಡ ಗ್ರಾಮದಲ್ಲಿ ಮನೆಯೊಂದು ನೆಲಸಮವಾಗಿದೆ. ಹೊನ್ನಾವರ ತಾಲೂಕಿನ ಕರ್ನಲ್ ಹಿಲ್ ಬಳಿ ಗುಡ್ಡ ಕುಸಿದು ರಸ್ತೆ ಮೇಲೆ ಬಿದ್ದಿದೆ. ಅಲ್ಲದೇ, ಜಿಲ್ಲೆಯಲ್ಲಿ ಜನ- ಜೀವನ ಅಸ್ತವ್ಯಸ್ಥವಾಗಿದೆ.