ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ನಿಡೀದ ಶಿಕ್ಷಣ ಸಚಿವ ಮಧು ಬಂಗಾರಪ್ಪ…..
ವಾರದಲ್ಲಿ ಆರು ದಿನ ಸಿಗಲಿದೆ ಮೊಟ್ಟೆ..?
ಶೀಘ್ರದಲ್ಲೇ ನೂತನ ೧೦ ಸಾವಿರ ಶಿಕ್ಷಕರ ನೇಮಕ…
500 ಕರ್ನಾಟಕ ಪಬ್ಲಿಕ್ ಶಾಲೆ ಆರಂಭ!! ಸಚಿವ ಮಧು ಬಂಗಾರಪ್ಪ…
ಶಿವಮೊಗ್ಗ : ಗುಣಮಟ್ಟದ ಶಿಕ್ಷಣ ಮತ್ತು ಪರೀಕ್ಷಾ ಪಾವಿತ್ರ್ಯತೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು ವಿದ್ಯಾರ್ಥಿಗಳು ಉತ್ತಮ ಫಲತಾಂಶ ಪಡೆಯಲು ಅನುಕೂಲಕರವಾದ ಎಲ್ಲ ವ್ಯವಸ್ಥೆಯನ್ನು ಶಿಕ್ಷಣ ಇಲಾಖೆ ಮಾಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಹೇಳಿದರು.
ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಗುರುವಾರ ನಗರದ ಅಂಬೇಡ್ಕರ್ ಭವನದಲ್ಲಿ 2022-23 ನೇ ಸಾಲಿನಲ್ಲಿ ಎಸ್ ಎಸ್ಎಲ್ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ ಹಾಗೂ 2023-24 ನೇ ಸಾಲಿನಲ್ಲಿ ಎಸ್ ಎಸ್ ಎಲ್ಸಿಯಲ್ಲಿ ಶೇ.100 ಫಲಿತಾಂಶ ಪಡೆದ ಶಾಲೆಗಳಿಗೆ ಏರ್ಪಡಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಎಸ್ಎಸ್ಎಲ್ಸಿ ಯಲ್ಲಿ ಉತ್ತಮ ಅಂಕ ಮತ್ತು ಶೇ.100 ಫಲಿತಾಂಶ ಪಡೆದ ವಿದ್ಯಾರ್ಥಿಗಳು ಹಾಗೂ ಶಾಲೆಗಳು ಜಿಲ್ಲೆಗೆ ಮತ್ತು ರಾಜ್ಯಕ್ಕೆ ಕೀರ್ತಿ ತಂದಿವೆ. ಈ ಬಾರಿ ಜಿಲ್ಲೆ ಈ ಬಾರಿ ಜಿಲ್ಲೆ ಎಸ್ಎಸ್ಎಲ್ಸಿ ಯಲ್ಲಿ 3 ನೇ ಸ್ಥಾನಕ್ಕೆ ಏರಿದ್ದು, ಈ ಸಾಧನೆಯನ್ನು ಶಿಕ್ಷಕ ವೃಂದಕ್ಕೆ ಅರ್ಪಿಸುತ್ತೇನೆ. ಗುಣಮಟ್ಟದ ಶಿಕ್ಷಣ ನೀಡಲು ಹಲವು ಬದಲಾವಣೆಗಳನ್ನು ಮಾಡಲಾಗಿದೆ. ವರ್ಷದಲ್ಲಿ ಮೂರು ಪರೀಕ್ಷೆಯಿಂದ ಹಾಗೂ ಕಾಪಿಗೆ ಯಾವುದೇ ಅವಕಾಶವಿಲ್ಲದೆ ಶಿಸ್ತುಬದ್ಧ ಪರೀಕ್ಷೆ ನಡೆಸಿರುವುದು ಉತ್ತಮ ಫಲಿತಾಂಶವನ್ನೇ ನೀಡಿದೆ. ರಾಜ್ಯದಲ್ಲಿ 50 ಸಾವಿರ ಶಿಕ್ಷಕರ ಕೊರತೆ ಇತ್ತು. ಕಡಿಮೆ ಕಾಲಮಿತಿಯಲ್ಲಿ 45 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿ ಶಿಕ್ಷಣ ನೀಡಲಾಗುತ್ತಿದೆ.
ವಾರದಲ್ಲಿ 6 ದಿನವೂ ಸಿಗಲಿದೆ ಮೊಟ್ಟೆ..?
ಮಕ್ಕಳ ಪೌಷ್ಟಿಕಾಂಶಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು 8ನೇ ತರಗತಿವರೆಗೆ ಮಾತ್ರ ನೀಡಲಾಗುತ್ತಿದ್ದ ಮೊಟ್ಟೆಯನ್ನು 10 ನೇ ತರಗತಿವರೆಗೆ ವಿಸ್ತರಿಸಲಾಗಿದೆ. ರಾಗಿ ಮಾಲ್ಟ್ ನೀಡಲಾಗುತ್ತಿದೆ. ಹಾಗೂ ವಾರದಲ್ಲಿ ಒಂದು ನೀಡುತ್ತಿದ್ದ ಮೊಟ್ಟೆಯನ್ನು 2 ದಿನಕ್ಕೆ ಏರಿಸಲಾಗಿದೆ. ಮುಂದಿನ ದಿನಗಳಲ್ಲಿ ವಾರದಲ್ಲಿ 6 ದಿನವೂ ಮೊಟ್ಟೆ ಕೊಡುವ ವ್ಯವಸ್ಥೆ ಮಾಡಲಾಗುವುದು ಎಂದು ಎಸ್.ಮಧು ಬಂಗಾರಪ್ಪ ಹೇಳಿದರು..
ಕೊಪ್ಪಳ:..
ನಿನ್ನೆ ಕೊಪ್ಪಳದಲ್ಲಿ ಮಾತನಾಡಿದ್ದ ಶಿಕ್ಷಣ ಸಚಿವ ಮಧು ಬಂಗಾರಪ್ಪ..2014ರಿಂದ ಇದುವರೆಗೂ ಅನುದಾನಿತ ಶಾಲೆಯಲ್ಲಿ ಶಿಕ್ಷಕರ ನೇಮಕವಾಗಿಲ್ಲ. ಐದು ವರ್ಷಕ್ಕೆ ಅನುದಾನಿತ ಶಾಲೆಗೆ ಅತಿಥಿ ಶಿಕ್ಷಕರ ನೇಮಕಾತಿ ಹಾಗೂ 10ರಿಂದ 12 ಸಾವಿರ ಶಿಕ್ಷಕರ ನೇಮಕ ಮಾಡುತ್ತಿದ್ದೇನೆ.
ಕರ್ನಾಟಕ ಪಬ್ಲಿಕ್ ಶಾಲೆ ಆರಂಭ ಮಾಡುತ್ತಿದೇವೆ..
ಈಗ 500 ಶಾಲೆಗಳಿದ್ದು ಇನ್ನೂ 500 ಶಾಲೆ ಆರಂಭಿಸಿ, ಎಲ್ ಕೆಜಿಯಿಂದಪಿಯುಸಿವರೆಗೆ ಶಿಕ್ಷಣ ನೀಡಲಾಗುತ್ತಿದೆ. ಯಾವುದೇ ಕಾರಣಕ್ಕೂ ಆಂಗನವಾಡಿ ಕಾರ್ಯಕರ್ತೆ ಯರಿಗೆ ತೊಂದರೆ ಮಾಡುವುದಿಲ್ಲ. ಶಾಲೆಗೆ ತಿಂಗಳೊಳಗೆ ಹೆಚ್ಚು ಮೊಟ್ಟೆ ನೀಡುವ ವ್ಯವಸ್ಥೆ ಮಾಡುತ್ತಿದ್ದೇವೆ. ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಿದ್ದೇವೆ. ಗುಣಮಟ್ಟಕ್ಕಾಗಿ ಕ್ರಮ ತೆಗೆದುಕೊಂಡಿದ್ದೇವೆ. ಆದರೆ