ಶಾಲಾ ಶೈಕ್ಷಣಿಕ ಕಾರ್ಯ್ರಮದಲ್ಲಿ ಹಾರ, ಶಾಲು ಇನ್ನಿತರ ವಸ್ತುಗಳಿಂದ ಸನ್ಮಾನಿಸುವುದು ನಿಷೇಧ…
ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ…
ಇಲಾಖೆಯ ಈ ಆದೇಶ ಸ್ವಾಗತಸರ್ಹ!!
ವಿಜಯಪುರ: ರಾಜ್ಯದ ಶಾಲಾ ಶೈಕ್ಷಣಿಕ ಕಾರ್ಯಕ್ರಮಗಳಲ್ಲಿ ಹಾರ, ಶಾಲು ಸೇರಿದಂತೆ ಇತರೆ ವಸ್ತುಗಳಿಂದ ಸನ್ಮಾನಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಮೂಲಕ ಇನ್ಮುಂದೆ ಶಾಲೆಗಳಲ್ಲಿ ಸಭೆ, ಸಮಾರಂಭಗಳಲ್ಲಿ ಹಾರ, ಶಾಲು ಹೊದಿಸಿ ಸನ್ಮಾನಿಸುವುದನ್ನು ನಿಷೇಧಿಸಿ ಆದೇಶಿಸಿದೆ.
ಈ ಕುರಿತಂತೆ ವಿಜಯಪುರದ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ, ಕ್ಷೇತ್ರ ಸಮನ್ವಯಾಧಿಕಾರಿಗಳಿಗೆ ಪತ್ರ ಬರೆದು ಸೂಚಿಸಿದ್ದಾರೆ. ಅದರಲ್ಲಿ ಎಂ.ಬಿ.ಪಾಟೀಲ ಮಾನ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು ಕರ್ನಾಟಕ ಸರ್ಕಾರ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರು ದಿನಾಂಕ: 13-07-2024 ರಂದು ನೀಡಿದ ನಿರ್ದೇಶನದ ಮೇರೆಗೆ, ವಿಜಯಪುರ ಜಿಲ್ಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯಡಿಯಲ್ಲಿ ಬರುವ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ನಡೆಸಲಾಗುವ ಶಾಲಾ ಶೈಕ್ಷಣಿಕ ಕಾರ್ಯಕ್ರಮಗಳಲ್ಲಿ ಮತ್ತು ಇತರೆ ಉದ್ಘಾಟನಾ ಸಮಾರಂಭಗಳಲ್ಲಿ ಅನಗತ್ಯವಾಗಿ ಹಣವನ್ನು ಖರ್ಚು ಮಾಡಿ ಹಾರ, ಶಾಲು ನೆನಪಿನ ಕಾಣಿಕೆಗಳನ್ನು ತಂದು ಸನ್ಮಾನ ಮಾಡುವುದರಲ್ಲಿ ಸಮಯ ವ್ಯರ್ಥ ಮಾಡಬೇಡಿರಿ ಅಂತ ತಿಳಿಸಿದ್ದಾರೆ.
ಸನ್ಮಾನ ಮತ್ತು ಇತರೆ ನೆನಪಿನ ಕಾಣಿಕೆಗಳಿಗೆ ತಗಲುವ ಮೊತ್ತವನ್ನು ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವ ಬಡ ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕ ಸಾಮಗ್ರಿಗಳನ್ನು ಒದಗಿಸಲು ಹಾಗೂ ಸರ್ಕಾರಿ ಶಾಲೆಗೆ ಬೇಕಾಗಿರುವ ಕಲಿಕೆಗೆ ಪೂರಕ ಶೈಕ್ಷಣಿಕ ವಸ್ತುಗಳನ್ನು ದೇಣಿಗೆ ನೀಡಲು ಸೂಚನೆ ನೀಡಿದ್ದಾರೆ ಅಂತ ಹೇಳಿದ್ದಾರೆ.
ಆದ್ದರಿಂದ ಮುಂದಿನ ದಿನಗಳಲ್ಲಿ ವಿಜಯಪುರ ಜಿಲ್ಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯಡಿಯಲ್ಲಿ ಬರುವ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ನಡೆಸಲಾಗುವ ಶಾಲಾ ಶೈಕ್ಷಣಿಕ ಮತ್ತು ಇತರೆ ಉದ್ಘಾಟನಾ ಸಮಾರಂಭಗಳಲ್ಲಿ ಹಾರ ಹಾಗೂ ಶಾಲು ಇತ್ಯಾದಿ ವಸ್ತುಗಳಿಂದ ಸನ್ಮಾನ ಮಾಡುವುದನ್ನು ಕಡ್ಡಾಯವಾಗಿ ನಿಷೇದಿಸಿದೆ. ಮಾನ್ಯ ಸಚಿವರ ನಿರ್ದೇಶನವನ್ನು ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಮುಖ್ಯಸ್ಥರು ಪಾಲಿಸಲು ತಿಳಿಸಿದ್ದಾರೆ.
ಹೀಗಾಗಿ ಇದು ಕೇವಲ ವಿಜಯಪುರ ಜಿಲ್ಲೆಗೆ ಮಾತ್ರವೇ ಸೀಮಿತವಾಗುವುದಿಲ್ಲ. ರಾಜ್ಯದ ಎಲ್ಲಾ ಶಾಲೆಗಳಿಗೂ ಈ ಆದೇಶವು ಅನ್ವಯವಾಗುವಂತದ್ಧಾಗಿದೆ. ಸೋ ರಾಜ್ಯದ ಶಾಲಾ ಶೈಕ್ಷಣಿಕ ಸಭೆ, ಸಮಾರಂಭಗಳಲ್ಲಿ ಇನ್ಮುಂದೆ ಹಾರ ಹಾಕಿ, ಶಾಲು ಹೊದಿಸಿ, ಫಲಪುಷ್ಟ ನೀಡಿ ಸನ್ಮಾನಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿದಂತೆ ಆಗಿದೆ..