ನಿರಂತರವಾಗಿ ಮಳೆ ಸುರಿಯುತ್ತಿರುವ ಮಳೆ!!
ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಸುಳ್ಳು ಸುದ್ದಿ ಪ್ರಚಾರ ಮಾಡಿದ್ದವರ ಮೇಲೆ FIR ದಾಖಲಿಸಿದ ಡಿಸಿ…
ಶಾಲೆಗೆ ರಜೆ ನೀಡುವುದರ ಕುರಿತು ನಿಮ್ಮ ಅಧಿಕಾರಿಗಳಿಂದ ಖಚಿತಪಡಿಸಿಕೊಳ್ಳಿ..
ಮಂಗಳೂರು: ಜುಲೈ 18 ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ನಕಲಿ ಆದೇಶವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
ಈ ಹಿಂದಿನ ಆದೇಶವನ್ನು ಎಡಿಟ್ ಮಾಡಿ, ಜುಲೈ 18 ಎಂದು ತಿದ್ದಲಾಗಿದೆ. ಇದನ್ನು ಸೃಷ್ಟಿಸಿದವರ ಮೇಲೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹಂಚುವವರ ವಿರುದ್ಧ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ..