ಶಾಲಾ ಅವಧಿಯಲ್ಲಿ ಮಕ್ಕಳ ಮೇಲೆ ಗಮನ…
ಬಿಸಿಯೂಟದ ವಿರಾಮವಿದ್ದಾಗ ವೀಷಕಾರಿ ಬೀಜ ಸೇವಿಸಿ ಅಸ್ವಸ್ತಗೊಂಡ 8 ಜನ ವಿದ್ಯಾರ್ಥಿಗಳು…
ಓರ್ವ ವಿದ್ಯಾರ್ಥಿಯ ಸ್ಥಿತಿ ಚಿಂತಾಜನಕ..
ಬಳ್ಳಾರಿ : ವಿಷಕಾರಿ ಬೀಜ ಸೇವಿಸಿ 8 ಶಾಲಾ ಮಕ್ಕಳು ಅಸ್ವಸ್ಥಗೊಂಡ ಘಟನೆ ಸಿರಗುಪ್ಪ ತಾಲೂಕಿನ ತೆಕ್ಕಲಕೋಟೆ ಗ್ರಾಮದಲ್ಲಿ ನಡೆದಿದೆ.
ಶಾಲೆಯಲ್ಲಿ ಮಧ್ಯಾಹ್ನದ ಊಟದ ವಿರಾಮದಲ್ಲಿ ಹೊರಗೆ ಹೋದ ಮಕ್ಕಳು ಗೊತ್ತಿಲ್ಲದೇ ವಿಷಕಾರಿ ಬೀಜ ಸೇವಿಸಿ ಅಸ್ವಸ್ಥಗೊಂಡಿದ್ದಾರೆ. ವಾಂತಿ ಭೇದಿ ಕಾಣಿಸಿಕೊಂಡ ಕೂಡಲೇ 8 ಮಂದಿ ವಿದ್ಯಾರ್ಥಿಗಳನ್ನು ಸಿರಗುಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವಾಲ್ಮೀಕಿ ನಗರದ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. 8 ಮಂದಿ ಮಕ್ಕಳ ಪೈಕಿ ಓರ್ವ ವಿದ್ಯಾರ್ಥಿ ಸ್ವಲ್ಪ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.