ಸನ್ಮಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ..
ಮಾನ್ಯ ಜಿಲ್ಲಾಧಿಕಾರಿಗಳು ಬಳ್ಳಾರಿ ಇವರ ಮುಖಾಂತರ ಮನವಿ ಸಲ್ಲಿಕೆ..
ಮಾನ್ಯರೇ,
ವಿಷಯ: ಕರ್ನಾಟಕ ಸರ್ಕಾರವು ಒಳ ಮೀಸಲಾತಿಯನ್ನು ಅತಿ ಶೀಘ್ರವಾಗಿ ಜಾರಿಗೊಳಿಸಲು ಆಗ್ರಹ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿ ಆದ ನಾವುಗಳು ತಮ್ಮಲ್ಲಿ ಮನವಿ ಮಾಡಿಕೊಳ್ಳುವುದೇನೆಂದರೆ, ಹಲವು ದಶಕಗಳ ಹೋರಾಟದ ಫಲವಾಗಿ ಮಾನ್ಯ ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯವು ಒಳ ಮೀಸಲಾತಿಯನ್ನು ಜಾರಿ ಮಾಡಲು ಐತಿಹಾಸಿಕ ತೀರ್ಪು ನೀಡಿದ ಪ್ರಯುಕ್ತ ಸನ್ಮಾನ್ಯ ಶ್ರೀ. ಸಿದ್ದರಾಮಯ್ಯ, ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ ಇವರು ಕೂಡಲೇ ಕರ್ನಾಟಕ ರಾಜ್ಯದಲ್ಲಿ ದಮನಿತ ಪರಿಶಿಷ್ಟ ಜಾತಿಗೆ ಒಳ ಮೀಸಲಾತಿಯನ್ನು ಕಲ್ಪಿಸಿ ಶೀಘ್ರವೇ ಜಾರಿಗೊಳಿಸಲು ಆದಿಜಾಂಬವ ಕ್ಷೇಮಾಭಿವೃದ್ಧಿ ಸಂಘ (ರಿ), ಬಳ್ಳಾರಿ ವತಿಯಿಂದ ಆಗ್ರಹಿಸುತ್ತೇವೆ.