ರಾಜ್ಯದಾದ್ಯಂತ ದಿನಾಂಕ: 12/08/2024 ರಂದು ಪ್ರಾಥಮಿಕ ಶಾಲೆಗಳು ಎಂದಿನಂತೆ ಕಾರ್ಯ ನಿರ್ವಹಿಸುವ ಬಗ್ಗೆ:
ಉಲ್ಲೇಖ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ) ಬೆಂಗಳೂರು ಇವರ ಮನವಿ
ವಿಷಯದನ್ವಯ, ಉಲ್ಲೇಖಿತ ಪತ್ರದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ) ಬೆಂಗಳೂರು ಇವರು ಶಿಕ್ಷಕರ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ದಿನಾಂಕ: 12/08/2024 ರಂದು ಬೆಂಗಳೂರು ಚಲೋ ಚಳುವಳಿಯನ್ನು ಹಮ್ಮಿಕೊಂಡಿರುವುದು ಇಲಾಖೆಯ ಗಮನಕ್ಕೆ ಬಂದಿರುತ್ತದೆ. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ನಡತೆ) ನಿಯಮಗಳು-2021ರ ಪ್ರಕಾರ ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳುವುದು ನಡತೆ ನಿಯಮಗಳ ಉಲ್ಲಂಘನೆಯಾಗುವುದರಿಂದ ದಿನಾಂಕ: 12/08/2024ರಂದು ಶಾಲೆಗಳನ್ನು ಮುಚ್ಚಿ ಮುಷ್ಕರದಲ್ಲಿ ಭಾಗವಹಿಸಲು ಹಾಗೂ ಪಾಠ ಬೋಧನೆಗೆ ಅಡಚಣೆ ಉಂಟುಮಾಡಲು ಅವಕಾಶವಿರುವುದಿಲ್ಲ.
ಪ್ರಯುಕ್ತ ದಿನಾಂಕ: 12/08/2024ರಂದು ಎಂದಿನಂತೆ ಶಾಲೆಗಳಲ್ಲಿ ಪಾಠ ಪ್ರವಚನಗಳು ನಡೆಯಲು ಜಿಲ್ಲಾ ಹಂತದಲ್ಲಿ ಉಪನಿರ್ದೇಶಕರು(ಆಡಳಿತ) ಇವರು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಹಾಗೂ ಈ ಕುರಿತಂತೆ ತಮ್ಮ ವ್ಯಾಪ್ತಿಯ ಎಲ್ಲಾ ಸರ್ಕಾರಿ ಶಾಲೆಗಳ ಮುಖ್ಯೋಪಾಧ್ಯಾಯರುಗಳಿಗೆ ಸೂಚಿಸಲು ತಿಳಿಸಿದೆ. ಅನಗತ್ಯ ಗೊಂದಲ ಸೃಷ್ಟಿಸಿ ಕರ್ತವ್ಯಕ್ಕೆ ಗೈರುಹಾಜರಾಗಿ ಮುಷ್ಕರದಲ್ಲಿ ಪಾಲ್ಗೊಂಡು ಶಾಲೆಗಳನ್ನು ಮುಚ್ಚಿಸಿರುವುದು ಕಂಡುಬಂದಲ್ಲಿ ಅಂತಹಾ ಶಾಲೆಗಳ ನಿಯಮಾನುಸಾರ ಅಗತ್ಯ ಶಿಸ್ತು ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದೆ. ಮುಖ್ಯಶಿಕ್ಷಕರು/ಶಿಕ್ಷಕರುಗಳ ವಿರುದ್ಧ ನಿಯಮಾನುಸಾರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಾಲುಗುವುದೆಂದು ಶಿಕ್ಷಣ ಇಲಾಖೆ ಆಯುಕ್ತರು ಆದೇಶ ಮಾಡಿರುತ್ತಾರೆ…