ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ ನಿಡೀದ ಶಿಕ್ಷಣ ಸಚಿವ ಮಧು ಬಂಗಾರಪ್ಪ.
ಪಾಠದ ಜೊತೆ..
ತುಮಕೂರು : ಎಸ್ ಎಸ್ ಎಲ್ ಸಿ ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆಯು ಮಹತ್ವದ ಕ್ರಮ ಕೈಗೊಂಡಿದ್ದು, ವಾರಕ್ಕೊಮ್ಮೆ ವಿಶೇಷ ತರಗತಿ ತೆಗೆದುಕೊಳ್ಳಲು ಶಿಕ್ಷಕರಿಗೆ ಸೂಚನೆ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮುಂದಿನ ಮೂರು ವರ್ಷಗಳಲ್ಲಿ 3,000 ಕೆಪಿಎಸ್ ಶಾಲೆಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ.
ಪ್ರಸಕ್ತ ವರ್ಷದಲ್ಲೇ 500 ಶಾಲೆಗಳನ್ನು ಆರಂಭಿಸಲಾಗುವುದು, ಎಲ್ ಕೆಜಿಯಿಂದ ಹಿಡಿದು ಪಿಯುಸಿವರೆಗೂ ಒಂದೇ ಕ್ಯಾಂಪಸ್ ನಲ್ಲಿ ಶಿಕ್ಷಣ ನೀಡುವ ಉದ್ದೇಶವಿದೆ ಎಂದು ಹೇಳಿದ್ದಾರೆ.
ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕೆ ಸೆಪ್ಟೆಂಬರ್ ನಿಂದ ಪ್ರತಿನಿತ್ಯವೂ ಮೊಟ್ಟೆ ನೀಡಲಾಗುತ್ತದೆ. . ಸದ್ಯ ವಾರದಲ್ಲಿ ಎರಡು ದಿನ ಮೊಟ್ಟೆ ನೀಡಲಾಗುತ್ತಿದ್ದು, ಅಜೀಂ ಪ್ರೇಮ್ ಜೀ ಫೌಂಡೇಶನ್ ಸಹಕಾರದೊಂದಿಗೆ ಪ್ರತಿದಿನ ಮೊಟ್ಟೆ ಕೊಡುತ್ತೇವೆ ಎಂದು ತಿಳಿಸಿದ್ದಾರೆ.