ಐದನೇ ತರಗತಿ ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದ ಹೇಯ ಕೃತ್ಯ!! ಶಿಕ್ಷಕನನ್ನು ಬಂಧಿಸಿದ ಪೋಲಿಸರು…
ಶಿಕ್ಷಕ ಅಮಾನತ್!!!
ಕಲಬುರಗಿ: ಐದನೇ ತರಗತಿಯ ವಿದ್ಯಾರ್ಥಿನಿಯನ್ನು ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಲ್ಲಿ ಆಳಂದ ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಯ ಓರ್ವ ಶಿಕ್ಷಕನನ್ನು ಆಳಂದ ಪೊಲೀಸರು ಬಂಧಿಸಿದ್ದಾರೆ.
ಮಲ್ಲಿಕಾರ್ಜುನ್ ಬಂಧನಕ್ಕೆ ಒಳಗಾದ ಶಿಕ್ಷಕ. ಮಧ್ಯಾಹ್ನ ಬಿಸಿಯೂಟ ಮಾಡಿ ಕೊಠಡಿಗೆ ತೆರಳಿದ್ದ ಬಾಲಕಿಯನ್ನು ಆರೋಪಿ ಶಿಕ್ಷಕ ಅತ್ಯಾಚಾರಕ್ಕೆ ಯತ್ನಿಸಿದ್ದಾನೆನ್ನಲಾಗಿದೆ
ಬಾಲಕಿ ಚೀರಾಡುತ್ತಿದ್ದಂತೆ ಆತ ಅಲ್ಲಿಂದ ಓಡಿ ಹೋಗಿದ್ದಾನೆ ಎಂದು ಆರೋಪಿಸಲಾಗಿದೆ. ಗಾಬರಿಗೊಂಡ ವಿದ್ಯಾರ್ಥಿನಿ ಬಳಿಕ ಮನೆಗೆ ತೆರಳಿ ಪೋಷಕರಿಗೆ ವಿಷಯ ತಿಳಿಸಿದ್ದಾಳೆ.
ಪೋಷಕರು ಮುಖ್ಯ ಶಿಕ್ಷಕರ ಗಮನಕ್ಕೆ ತಂದ ಬಳಿಕ ಈ ಬಗ್ಗೆ ಪೊಲೀಸ್ ದೂರು ನೀಡಿದ್ದಾರೆ. ಅದರಂತೆ ಆರೋಪಿ ಶಿಕ್ಷಕನನ್ನು ಆಳಂದ ಪೊಲೀಸರು ಬಂಧಿಸಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.