ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿ, ನೌಕರರಿಗೆ ಓಪಿಎಸ್ ಜಾರಿ ಸಂಬಂಧಿಸಿದಂತೆ ನೌಕರರ ಸಂಘದಿಂದ ಸಿಎಮ್ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಕೆ..
ಸಿ.ಎಸ್.ಷಡಕ್ಷರಿ…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆಗಸ್ಟ್ 17ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರು ಅರಮನೆ ಮೈದಾನದ ತ್ರಿಪುರವಾಸಿನಿ ಸಭಾಂಗಣದಲ್ಲಿ ‘ನಮ್ಮಭಿಮಾನದ ಅಭಿನಂದನಾ ಸಮಾರಂಭ’ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.
ಷಡಾಕ್ಷರಿ ತಿಳಿಸಿದ್ದಾರೆ.
ಏಳನೇ ವೇತನ ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸರ್ಕಾರಿ ನೌಕರರ ಪರವಾಗಿ ಅಭಿನಂದಿಸಲಾಗುವುದು. ಸಮಾರಂಭದಲ್ಲಿ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಸಮಾರಂಭದಲ್ಲಿ 50 ಸಾವಿರ ನೌಕರರು ಭಾಗವಹಿಸಲಿದ್ದು, ಅವರಿಗೆಲ್ಲ ಸರ್ಕಾರದ ಒಒಡಿ ಸೌಲಭ್ಯದಡಿ ವಿಶೇಷ ಸಂದರ್ಭಿಕ ರಜೆ ಮಂಜೂರು ಮಾಡಲಾಗಿದೆ. ಸರ್ಕಾರಿ ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನ, ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿ, ಎನ್.ಪಿ.ಎಸ್. ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಜಾರಿಗೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.