ವಿದ್ಯಾರ್ಥಿಗೆ ಶಿಕ್ಷಕರೇ ಆದ್ರು ವಿಲನ್… ಶಿಕ್ಷಕ ಕಂಬಿ ಹಿಂದೆ!!!
ಶಾಲೆಯಲ್ಲಿ ಮಕ್ಕಳನ್ನು ಮುಟ್ಡದೇ ವಿದ್ಯೆ ಕಲಿಸಬೇಕು???
ಯಾದಗಿರಿ, ಆಗಸ್ಟ್.24: ಗಣಿತ ವಿಷಯದಲ್ಲಿ ಕಡಿಮೆ ಅಂಕ ಪಡೆದಿದ್ದಾನೆ ಎಂದು ಶಿಕ್ಷಕ ವಿದ್ಯಾರ್ಥಿಗೆ ಮನಸ್ಸೋ ಇಚ್ಛೆ ಥಳಿಸಿದ ಘಟನೆ ಯಾದಗಿರಿ (Yadgir) ತಾಲೂಕಿನ ಸೈದಾಪುರ ಪಟ್ಟಣದಲ್ಲಿ ನಡೆದಿದೆ. ವಿದ್ಯಾರ್ಥಿ ಮೇಲೆ ಶಿಕ್ಷಕ ಕ್ರೌರ್ಯ ಮೆರೆದಿದ್ದಾನೆ. ಚಡಿ ಏಟಿನಿಂದ ಬಾಲಕನ ಬೆನ್ನಿನ ಮೇಲೆ ಬಾಸುಂಡೆ ಬರುವ ಹಾಗೆ ಬಾರಿಸಿದ್ದಾನೆ. ಸದ್ಯ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಶಿಕ್ಷಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸೈದಾಪುರ ಪಟ್ಟಣದಲ್ಲಿರುವ ಮಹಾವೀರ್ ಜೈನ್ ಆಂಗ್ಲ ಮಾಧ್ಯಮ ಖಾಸಗಿ ಶಾಲಾ ಶಿಕ್ಷಕನಿಂದ ವಿದ್ಯಾರ್ಥಿಗಳ ಮೇಲೆ ಕ್ರೌರ್ಯ ನಡೆಯುತ್ತಿದೆ. ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದ ಯುವರಾಜ ಎಂಬ ಬಾಲಕ ಗಣಿತದಲ್ಲಿ ಕಡಿಮೆ ಅಂಕ ಪಡೆದ ಎಂಬ ಕಾರಣಕ್ಕೆ ಶಿಕ್ಷಕ ಡೆಲ್ವೀಲ್ ಮನ ಬಂದಂತೆ ಥಳಿಸಿದ್ದಾನೆ. ಆಗಸ್ಟ್ 19 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಥಳಿತಕ್ಕೆ ಒಳಗಾದ ವಿದ್ಯಾರ್ಥಿ ಯುವರಾಜ್ ತನ್ನ ಪಾಲಕರಿಗೆ ವಿಷಯ ತಿಳಿಸಿದ್ದು ಶಿಕ್ಷಕನ ವಿರುದ್ಧ ಸೈದಾಪುರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.