ಹಳೆ ಪಿಂಚಣಿ ಜಾರಿಗೆ ಒತ್ತಾಯಿಸಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಿದ ನೌಕರರು.
ಸವದತ್ತಿ ತಾಲೂಕಿನಲ್ಲಿ ವಿವಿಧ ಇಲಾಖೆಗಳ ನೌಕರರು ಶುಕ್ರವಾರ ದಿನ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಿದರು. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಪಿಂಚಣಿ ಯೋಜನೆ ಹಾಗೂ ಏಕೀಕೃತ ಪಿಂಚಣಿ ಯೋಜನೆ ವಿರೋಧಿಸಿ ನೌಕರರು ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಿದರು.
ತಾಲೂಕ ಕ ರಾ ಸ ಎನ್ ಪಿ ಎಸ್ ನೌಕರರ ಸಂಘದ ಅಧ್ಯಕ್ಷರಾದ ಸುನೀಲ ಏಗನಗೌಡ್ರ ಮಾತನಾಡಿ ಇಂದು ದೇಶಾದ್ಯಂತ ಎನ್ಪಿಎಸ್ ಹಾಗೂ ಯುಪಿಎಸ್ ವಿರೋಧಿಸಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಯುತ್ತಿದೆ. ಎನ್ಪಿಎಸ್ ಹಾಗೂ ಯುಪಿಎಸ್ ಎರಡೂ ಕೂಡ ನೌಕರರ ಭವಿಷ್ಯಕ್ಕೆ ಮಾರಕವಾಗಿವೆ. ಹಳೆ ಪಿಂಚಣಿ ಮರುಜಾರಿ ಮಾಡುವವರೆಗೆ ಹೋರಾಟ ನಿರಂತರ ಎಂದು ಹೇಳಿದರು. ತಾಲೂಕಿನ ಶಿಕ್ಷಕರ ಸಂಘದ ಅಧ್ಯಕ್ಷರಾದ ಕಿರಣ್ ಕುರಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.