“ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಅಗತ್ಯ”ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷರಾದ ಡಿ ಎಚ್ ಪಾಟೀಲ…
ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಅರಳಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದ್ದು, ಮಕ್ಕಳು ಕೂಡ ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷರಾದ ಡಿ ಎಚ್ ಪಾಟೀಲ ಹೇಳಿದರು.
ಅವರು ಲಕ್ಷ್ಮೇಶ್ವರದ ಬಿ ಸಿ ಎನ್ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಲಕ್ಷ್ಮೇಶ್ವರ ಉತ್ತರ ಮತ್ತು ಮಾಗಡಿ ಕ್ಲಸ್ಟರ್ ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಭಾ ಕಾರಂಜಿ ಒಂದು ವಿನೂತನ ಕಾರ್ಯಕ್ರಮವಾಗಿದ್ದು, ಕ್ಲಸ್ಟರ್, ಬ್ಲಾಕ್ ಮತ್ತು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸ್ಪರ್ಧೆಗಳನ್ನು ನಡೆಸಲಾಗುತ್ತದೆ. ಇದು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳಿಗೆ ಸಾಮಾನ್ಯ ವೇದಿಕೆಯನ್ನು ಒದಗಿಸುತ್ತದೆ, ಇದರಲ್ಲಿ ಯಶಸ್ವಿ ಮಕ್ಕಳಿಗೆ ಪ್ರಶಂಸಾಪತ್ರಗಳು ಮತ್ತು ಬಹುಮಾನಗಳನ್ನು ನೀಡಲಾಗುತ್ತದೆ ಮತ್ತು ಆಯ್ಕೆಯಾದ ವಿದ್ಯಾರ್ಥಿಗಳನ್ನು ಉನ್ನತ ಮಟ್ಟದ ಸ್ಪರ್ಧೆಗಳಿಗೆ ಕಳುಹಿಸಲಾಗುತ್ತದೆ ಎಂದು ಶಿರಹಟ್ಟಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಈಶ್ವರ ಮೆಡ್ಲೇರಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಬಿ ಎಮ್ ಯರಗುಪ್ಪಿ ಮಾತನಾಡಿ, ಪ್ರತಿಯೊಂದು ಮಗುವಿನಲ್ಲೂ ಒಂದಲ್ಲ ಒಂದು ಸಾಂಸ್ಕೃತಿಕ ಪ್ರತಿಭೆ ಅಡಗಿರುತ್ತದೆ. ಅದನ್ನು ಗುರುತಿಸಿ, ಪ್ರೋತ್ಸಾಯಿಸಬೇಕು ಎಂದರು.
ಪ್ರೌಢ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷರಾದ ಎಚ್ ಎಮ್ ಗುತ್ತಲ ಮಾತನಾಡಿ, ಸರ್ಕಾರ ಶಾಲಾ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪ್ರತಿಭಾ ಕಾರಂಜಿ, ಮಕ್ಕಳ ಮೇಳ, ಕ್ರಿಡಾ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಮಕ್ಕಳು ತಮ್ಮಲ್ಲಿರುವ ಕಲೆಯನ್ನು ಪ್ರದರ್ಶಿಸಬೇಕು ಎಂದರು.
ಕೊನೆಯದಾಗಿ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸ್ಪರ್ಧೆಯಲ್ಲಿ 13 ಪ್ರಾಥಮಿಕ ಶಾಲೆಗಳು ಮತ್ತು 11 ಪ್ರೌಢಶಾಲೆಗಳ ಮಕ್ಕಳು ಭಾಗವಹಿಸಿದ್ದರು.ಇದೇ ಸಂದರ್ಭದಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು.
ಬಿ ಸಿ ನ್ ಸ್ಪೆಕ್ಟ್ರಂ ಆಡಳಿತಾಧಿಕಾರಿ ನಾಗರಾಜ ಯಂಡಿಗೇರಿ ಅವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕ ರಾ ಸ ನೌ ಸಂಘದ ಅಧ್ಯಕ್ಷರಾದ ಡಿ ಎಚ್ ಪಾಟೀಲ, ಎನ್ ಪಿ ಎಸ್ ಅಧ್ಯಕ್ಷರಾದ ಎಫ್ ಎಸ್ ತಳವಾರ, ಗೀತಾ ಹಳ್ಯಾಳ, ಬಿ ಆರ್ ಪಿ ಗಳಾದ ಈಶ್ವರ ಮೆಡ್ಲೇರಿ, ಬಿ ಎಮ್ ಯರಗುಪ್ಪಿ,ವಿ ಎಚ್ ದೀಪಾಳಿ, ಮುಖ್ಯ ಶಿಕ್ಷಕರಾದ ವಿರೇಶ ಕಮ್ಮಾರ, ಪ್ರೌ ಶಾ ಸಂಘದ ಎಸ್ ಡಿ ಲಮಾಣಿ, ಎಚ್ ಎಮ್ ಗುತ್ತಲ, ಕ್ಲಸ್ಟರ ಸಿಆರ್ಪಿ ಯವರಾದ ಉಮೇಶ ನೇಕಾರ ಮತ್ತು ಕೆ ಪಿ ಕಂಬಳಿ, ಎನ್ ಎನ್ ಸಾವಿರಕುರಿ, ಎನ್ ಎ ಮುಲ್ಲಾ, ಎಸ್ ಎಮ್ ಬೋಮಲೆ, ಸಿ ವಿ ವಡಕಣ್ಣವರ, ಗಿರೀಶ್ ನೇಕಾರ, ಜ್ಯೋತಿ ಗಾಯಕವಾಡ,ಲೋಕೇಶ ಮಠದ, ಶಿಕ್ಷಕರರಾದ ಎನ್ ಎನ್ ಶಿಗ್ಲಿ, ಎಚ್ ಡಿ ನಿಂಗರೆಡ್ಡಿ, ಡಿ ಸಿ ಪತ್ತಾರ ಹಾಗೂ ಕ್ಲಸ್ಟರಿನ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಎನ್ ಎಸ್ ಬಂಕಾಪೂರ ನಿರೂಪಿಸಿದರು, ಸತೀಶ ಬೋಮಲೆ ಸ್ವಾಗತಿಸಿದರು. ಉಮೇಶ ನೇಕಾರ ವಂದಿಸಿದರು.