Today Big News….
ಸರ್ಕಾರಿ ನೌಕರರಿಗೆ ಮುಖ್ಯವಾದ ಮಾಹಿತಿ…
ನೌಕರರ ಮುಂಬಡ್ತಿ ವಿಚಾರದಲ್ಲಿ ಮಹತ್ವದ ಬದಲಾವಣೆ.
ಬೆಂಗಳೂರು, ಅಕ್ಟೋಬರ್ 01: ಕರ್ನಾಟಕ ಸರ್ಕಾರ ರಾಜ್ಯ ಸರ್ಕಾರಿ ನೌಕರರ ಮುಂಬಡ್ತಿ ವಿಚಾರದಲ್ಲಿ ಮಹತ್ವದ ಬದಲಾವಣೆ ಮಾಡಲಿದೆ. ಇದಕ್ಕಾಗಿ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ತಿದ್ದುಪಡಿಯನ್ನು ಮಾಡಲಾಗುತ್ತದೆ. ಈ ಕುರಿತು ಸುತ್ತೋಲೆಯ ಮೂಲಕ ಮಾಹಿತಿ ನೀಡಲಾಗಿದ್ದು, ಬಡ್ತಿಗಾಗಿ ಕಾಯುತ್ತಿರುವ ಸರ್ಕಾರಿ ನೌಕರರಿಗೆ ಹೊಸ ನಿಯಮ ಸಂತಸ ತರಲಿದೆ. ನೇಮಕಾತಿಗಳಲ್ಲಿಯೂ ಬದಲಾವಣೆಯಾಗಲಿದೆ.
ಈ ಬಗ್ಗೆ ಕಲಾವತಿ ಎಸ್. ವಿ. ಸರ್ಕಾರದ ಜಂಟಿ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆ ಸುತ್ತೋಲೆಯನ್ನು ಹೊರಡಿಸಿದ್ದಾರೆ. ಈ ಸುತ್ತೋಲೆಯು ಮುಂಬಡ್ತಿಯಲ್ಲಿ 5 ವರ್ಷಗಳ ಸೇವ ಸಲ್ಲಿಸಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಕನಿಷ್ಟ 3 ವರ್ಷ ಸೇವೆ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳನ್ನು ಮುಂಬಡ್ತಿಗೆ ಪರಿಗಣಿಸಲು ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ತಿದ್ದುಪಡಿ ಮಾಡುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ.
ಸುತ್ತೋಲೆಯ ವಿವರಣೆ: ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಗಳ ಕಲ್ಯಾಣ ಸಮಿತಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕೆಲವು ಸರ್ಕಾರಿ ಅಧಿಕಾರಿ/ ನೌಕರರುಗಳು ನಿಯಮಾನುಸಾರ ಮೀಸಲಾತಿಗೆ ನಿಗದಿಪಡಿಸಿರುವ ಪ್ರಾತಿನಿಧ್ಯ ಮುಂಬಡ್ತಿಯಲ್ಲಿ ದೊರೆಯುವಂತೆ ಸದರಿ ಸಮಿತಿಗೆ ಮನವಿಗಳನ್ನು ಸಲ್ಲಿಸಿರುತ್ತಾರೆ.
ಈ ಬಗ್ಗೆ ಸದರಿ ಸಮಿತಿಯು ದಿನಾಂಕ 20-06-2024ರ ಸಭೆಯಲ್ಲಿ ಚರ್ಚಿಸಲಾಗಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧಿಕೃತ ಜ್ಞಾಪನ ಸಂಖ್ಯೆ ದಿನಾಂಕ 26.11.1982 ರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮುಂಬಡ್ತಿಯಲ್ಲಿ 5 ವರ್ಷಗಳ ಅರ್ಹತಾದಾಯಕ ಸೇವ ಸಲ್ಲಿಸಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಕನಿಷ್ಟ 3 ವರ್ಷ ಸೇವ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳನ್ನು ಮುಂಬಡ್ತಿಗೆ ಪರಿಗಣಿಸಲು ಎಲ್ಲಾ ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ತಿದ್ದುವ ಮಾಡುವ ಬಗ್ಗೆ ಸೂಚಿಸಲಾಗಿದೆ ಎಂದು ಹೇಳಿದೆ.
.
ಅದರಂತೆ, ಎಲ್ಲಾ ಸರ್ಕಾರಿ ಇಲಾಖೆಗಳು ಮತ್ತು ಅದರ ಅಧೀನದಲ್ಲಿರುವ ಸರ್ಕಾರಿ ಸಂಸ್ಥೆಗಳು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧಿಕೃತ ಜ್ಞಾಪನ ಸಂಖ್ಯೆ 26.11.1982 ರನ್ವಯ ಕ್ರಮವಹಿಸಬೇಕಾಗಿದೆ ಎಂದು ಹೇಳಿದೆ. ಅಧಿಕೃತ ಜ್ಞಾಪನದನ್ವಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮುಂಬಡ್ತಿಯಲ್ಲಿ ನಿಗದಿಪಡಿಸಲಾಗಿರುವ ಮೀಸಲಾತಿಯನ್ವಯ 5 ವರ್ಷಗಳ ಅರ್ಹತಾದಾಯಕ ಸೇವೆ ಸಲ್ಲಿಸಿದವರು ಲಭ್ಯವಿಲ್ಲದಿದ್ದಲ್ಲಿ ಕನಿಷ್ಠ 3 ವರ್ಷಗಳ ಅರ್ಹತಾದಾಯಕ ಸೇವೆಯನ್ನು ಸಲ್ಲಿಸಿರುವ ಅರ್ಹತೆ ಇರುವವರನ್ನು ಮುಂಬಡ್ತಿಗೆ ಪರಿಗಣಿಸಲು ಸರ್ಕಾರಿ ಇಲಾಖೆಗಳು ಹಾಗೂ ಆಯಾ ಇಲಾಖೆಯ ಅಧೀನದ ನಿಗಮ/ ಮಂಡಳಿ/ ಸಂಘ-ಸಂಸ್ಥೆ/ ಆಯೋಗ/ ವಿಶ್ವವಿದ್ಯಾಲಯಗಳು/ ಇತರೆ ಸ್ವಾಯುತ್ತ ಸಂಸ್ಥೆಗಳ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಈಗಾಗಲೇ ಅಳವಡಿಸಿಕೊಳ್ಳದಿದ್ದಲ್ಲಿ ಕಡ್ಡಾಯವಾಗಿ ಅಳವಡಿಸಿಕೊಳ್ಳತಕ್ಕದ್ದು ಹಾಗೂ ಅಳವಡಿಸಿಕೊಂಡಿರುವ ಬಗ್ಗೆ ಮಾಹಿತಿಯನ್ನು ಆಯುಕ್ತರು, ಸಮಾಜ ಕಲ್ಯಾಣ ಇಲಾಖೆ, ಇವರಿಗೆ ವರದಿ ಮಾಡಲು ಕೋರಿದೆ