ಇಬ್ಬರು ಅಧಿಕಾರಿಗಳನ್ನು ಅಮಾನತ್ ಮಾಡಿ ಆದೇಶ ಮಾಡಿದ ಸರ್ಕಾರ!! ಇವರು ಮಾಡಿರುವ ಪಾಪದ ಕೃತ್ಯಕ್ಕೆ ಕೇವಲ ಅಮಾನತ್ ಆದ್ರೆ ಸಾಲದು..!! ಇಂಥಹ ಅಧಿಕಾರಿಗಳಿಗೆ ಯಾವ ಶಿಕ್ಷೆ ನೀಡಬೇಕು ಅಂತ ನೀವೆ ಹೇಳಿ..
ಬೆಂಗಳೂರು: ಮೈಸೂರು ಜಿಲ್ಲೆಯಲ್ಲಿ ನಡೆದಿದ್ದಂತ ಭ್ರೂಣ ಹತ್ಯೆ ಪ್ರಕರಣ ಸಂಬಂಧ, ಇಬ್ಬರು ಅಧಿಕಾರಿಗಳ ತಲೆದಂಡವಾಗಿದೆ. ಮೈಸೂರು ಜಿಲ್ಲೆಯ ಈ ಹಿಂದಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹಾಗೂ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ರಂದೀಪ್ ಅವರು ಆದೇಶ ಹೊರಡಿಸಿದ್ದು, ಮೈಸೂರು ಜಿಲ್ಲೆಯ ಹಿಂದಿನ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರವಿ.ಪಿ ಹಾಗೂ ಹಾಲಿ ಮೈಸೂರು ತಾಲೂಕಿನ ತಾಲೂಕು ಆರೋಗ್ಯ ಅಧಿಕಾರಿ ಡಾ.ರಾಜೇಶ್ವರಿ.ಎಸ್…