ಏಳನೇ ವೇತನ ಆಯೋಗ ವರದಿ ಜಾರಿ ಸೇರಿದಂತೆ ಇವತ್ತಿನ ಸಚಿವ ಸಂಪುಟ ಸಭೆಯಲ್ಲಿ ನಡೆದ ಪ್ರಮುಖ ನಿರ್ಣಯಗಳು ಇಲ್ಲಿವೆ ನೋಡಿ..
ದಿನಾಂಕ 13-6-2024 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದ ಪ್ರಮುಖ ನಿರ್ಣಯಗಳ ಕುರಿತು ಕಾನೂನು, ನ್ಯಾಯ, ಮಾನವಹಕ್ಕುಗಳು, ಸಂಸದೀಯ ವ್ಯವಹಾರ ಮತ್ತು ಶಾಸನರಚನೆ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ ಅವರು ನಡೆಸಿದ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು: ಕಳೆದ ಸಚಿವ ಸಂಪುಟ ಸಭೆಯಲ್ಲಿ 147 ಟೆಂಡರ್ಗಳಿಗೆ ಟೆಂಡರ್ ಕರೆಯಲು ನೀಡಿರುವ ಆಡಳಿತಾತ್ಮಕ ಮಂಜೂರಾತಿಯ ಪೈಕಿ ಎಷ್ಟು ಟೆಂಡರ್ ಕರೆದು ಕೆಲಸ ಪ್ರಾರಂಭವಾಗಿದೆ ಎಂದು ಅವಲೋಕಿಸಿ, 94 ಪ್ರಸ್ತಾವಗಳಿಗೆ ಟೆಂಡರ್ ಗಳನ್ನು ಆಹ್ವಾನಿಸಲಾಗಿದೆ. 19 ಪ್ರಸ್ತಾವನೆಗಳು…