ಏಳನೇ ವೇತನ ನಮ್ಮ ರಾಜ್ಯ ಸರ್ಕಾರಿ ನೌಕರರಿಗೆ ದೂರದ ಬೆಟ್ಟವಾಯಿತೇ? ಅವಧಿ ವಿಸ್ತರಣೆ ಆಗುತ್ತಾ? ಏಳನೇ ವೇತನ ಆಯೋಗದಿಂದ ಸರ್ಕಾರಕ್ಕೆ ಎಷ್ಟು ಹೊರೆಯಾಗಲಿದೆ? ಇಲ್ಲಿದೆ ನೋಡಿ ಮಾಹಿತಿ..
ಬೆಂಗಳೂರು: 7ನೇ ವೇತನ ಆಯೋಗದ ಅವಧಿಯನ್ನು ಮತ್ತೆ ವಿಸ್ತರಿಸಲು ಆರ್ಥಿಕ ಇಲಾಖೆಯು ಮುಖ್ಯಮಂತ್ರಿಗೆ ಪ್ರಸ್ತಾವ ಸಲ್ಲಿಸಿದ್ದು, ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ.. ಗ್ಯಾರಂಟಿ ಯೋಜನೆಗಳಿಗೆ ಹಣಕಾಸು ಹೊಂದಾಣಿಕೆ ಮಾಡುವ ಸವಾಲು ಸರ್ಕಾರದ ಮುಂದಿದೆ. ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದೆ. ತಕ್ಷಣಕ್ಕೆ ನೌಕರರ ವೇತನ ಪರಿಷ್ಕರಣೆ ಮಾಡಿದರೆ ಆರ್ಥಿಕ ಹೊರೆಯಾಗಲಿದೆ. ಮಧ್ಯಮಾವಧಿ ವಿತ್ತೀಯ ಯೋಜನೆ ಪ್ರಕಾರ ವೇತನ ಪರಿಷ್ಕರಣೆಗೆ ವಾರ್ಷಿಕ 112 ಸಾವಿರ ಕೋಟಿಯಿಂದ 718 ಸಾವಿರ ಕೋಟಿ ಅಗತ್ಯವಿದೆ. ಏಪ್ರಿಲ್…