ಕಲ್ಬುರ್ಗಿಯಲ್ಲೊಂದು ಬುದ್ಧ ವಿಹಾರ ಪ್ರವಾಸ ಲೇಖನ ಶಿಕ್ಷಕ ಸಾಹಿತಿಗಳು ವೈ. ಬಿ. ಕಡಕೋಳ ಇವರಿಂದ ಬುದ್ಧ ಪೂರ್ಣಿಮೆ ಅಂಗವಾಗಿ
ಕಲ್ಬುರ್ಗಿಯಲ್ಲೊಂದು ವಿಶಿಷ್ಟ ಬುದ್ಧವಿಹಾರ . ಬಿಸಿಲ ನಾಡು ಕಲ್ಬುರ್ಗಿ ಎಂದ ಕೂಡಲೇ ನಮಗೆ ನೆನಪಾಗುವುದು ಇಲ್ಲಿನ ಶರಣ ಬಸವೇಶ್ವರ ದೇಗುಲ ಮತ್ತು ವಿಶ್ವವಿದ್ಯಾಲಯ. ತೊಗರಿ ನಾಡೆಂದು ಪ್ರಸಿದ್ದವಾದ ಕಲ್ಬುರ್ಗಿಯಲ್ಲೊಂದು ವಿಶಿಷ್ಟ ಬುದ್ಧವಿಹಾರವಿದೆ. ಇದನ್ನು ನೋಡಲೇಬೇಕು. ಇದು ನಗರದಿಂದ ದೂರವಿರುವ ಕಾರಣ ಸ್ವಂತ ವಾಹವಿದ್ದರೆ ಅನುಕೂಲ ಇಲ್ಲವೇ ಅಟೋ ಅಥವ ಸೇಡಂ ಕಡೆಗೆ ಹೋಗುವ ಬಸ್ ಮೂಲಕ ಇಲ್ಲಿಗೆ ಬರಬಹುದು. ಅಥವ ನಗರ ಸಾರಿಗೆ ಬಸ್ ಮೂಲಕವೂ ಬರಬಹುದು. ಇದು ನಗರದಿಂದ 7 ಕಿ. ಮೀ ಅಂತರದಲ್ಲಿದೆ. ಸೇಡಂ…