ಭ್ರಷ್ಟರಿಗೆ ಬೆಳಂಬೆಳ್ಳಗೆ ಶಾಕ್ ನೀಡಿದ ಲೋಕಾಯುಕ್ತ; ರಾಜ್ಯದ ಹಲವೆಡೆ ದಾಳಿ: ನಗದು ಹಣ , ಚಿನ್ನದ ಸರ ಪತ್ತೆ..
ಚಿತ್ರದುರ್ಗ ಜಿಲ್ಲೆಯಲ್ಲಿ ಇಬ್ಬರು ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ. ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ವಿವಿಧ ಇಲಾಖೆಗಳ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಏಕಕಾಲದಲ್ಲಿಯೇ 90 ಕಡೆ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಬೆಂಗಳೂರು, ಚಿತ್ರದುರ್ಗ, ಕಲಬುರಗಿ, ರಾಯಚೂರು, ಹಾಸನ, ಬೀದರ್, ದೇವದುರ್ಗ ಸೇರಿದಂತೆ ಹಲವು ಜಿಲ್ಲೆಗಳ ಭ್ರಷ್ಟ ಅಧಿಕಾರಿಗಳ ನಿವಾಸದ ಮೇಲೆ…