ತಹಶಿಲ್ದಾರ ಅಶೋಕ ಮನ್ನಿಕೇರಿ ಹೃದಯಘಾತದಿಂದ ನಿಧನ
ಬೆಳಗಾವಿ- ಬೆಳಗಾವಿಯ ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ತಹಶೀಲ್ದಾರರಾಗಿ ಕಾರ್ಯ ನಿರ್ವಹಿಸುತ್ತಿದ್ದ ಅಶೋಕ ಮನ್ನಿಕೇರಿ(46) ಮದ್ಯರಾತ್ರಿ ಮೃತಪಟ್ಟಿದ್ದಾರೆ. ಇವರು ಮೂಲತಃ ಗೋಕಾಕ ತಾಲೂಕಿನ ಕೊಣ್ಣೂರ ಗ್ರಾಮದವರು. ಮಣ್ಣಿಕೇರಿ ಅವರು ಕಂದಾಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಬಳಿಕ ತಹಸಿಲ್ದಾರ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಶಾಸಕರಾಗಿದ್ದ ಸಮಯದಲ್ಲಿ ಅವರ ಆಪ್ತ ಸಹಾಯಕರಾಗಿ ಕೆಲಸ ಮಾಡಿದ್ದರು. ಮೂಲಗಳ ಪ್ರಕಾರ ಮಧ್ಯರಾತ್ರಿ ಅವರಿಗೆ ಹೃದಯಾಘಾತ ವಾದ ಕಾರಣ ಕೆಎಲ್ಇ ಆಸ್ಪತ್ರೆಗೆ ಸೇರಿಸಲಾಗಿತ್ತು, ಮದ್ಯರಾತ್ರಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು…