ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ..
ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ.. ಬೆಂಗಳೂರು: ದ್ವಿತೀಯ ಪಿಯುಸಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಪ್ರತಿವರ್ಷ ಎರಡು ಪೂರಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆಯು ನಿರ್ಧರಿಸಿದ್ದು, ಪೂರಕ ಪರೀಕ್ಷೆ-2ಕ್ಕೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಆ.21ರಿಂದ ಸೆ.2ರ ವರೆಗೆ ಪೂರಕ ಪರೀಕ್ಷೆ-2 ನಡೆಯಲಿದೆ. ಬಹುತೇಕ ಪರೀಕ್ಷೆಗಳು ಮಧ್ಯಾಹ್ನ 2.15ರಿಂದ 5.30ರ ವರೆಗೆ ಆಯೋಜಿಸಲಾಗಿದೆ. ಆ.10 ನೋಂದಣಿಗೆ ಕೊನೆಯ ದಿನವಾಗಿದೆ. ಆಸಕ್ತರು ತಮ್ಮ ಕಾಲೇಜುಗಳಿಗೆ ತೆರಳಿ ನೋಂದಣಿ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಪರೀಕ್ಷಾ ಶುಲ್ಕವನ್ನು ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಪಾವತಿಸಬಹುದು….