ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಗೆ ಬೇರೆ ಹಣ ಸಂಗ್ರಹಿಸಿದರೆ ಶಿಸ್ತುಕ್ರಮ!! ಶಿಕ್ಷಣ ಇಲಾಖೆ ಹೆಚ್ಚುವರಿ ಆಯಕ್ತರಿಂದ ಡಿಡಿಪಿಐ,ಬಿಇಓ ಹಾಗೂ ಶಾಲೆಯ ಮುಖ್ಯ ಶಿಕ್ಷರಿಗೆ ಮುಖ್ಯ ಮಾಹಿತಿ..
ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಗೆ ಬೇರೆ ಹಣ ಸಂಗ್ರಹಿಸಿದರೆ ಶಿಸ್ತುಕ್ರಮ. ಧಾರವಾಡ : ಅಕ್ಷರ ದಾಸೋಹ ಯೋಜನೆಯಡಿ ಶಾಲಾ ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರವಾಗಿ ಮೊಟ್ಟೆ ಅಥವಾ ಬಾಳೆಹಣ್ಣು ಇಲ್ಲವೇ ಶೇಂಗಾಚೆಕ್ಕಿ ವಿತರಣೆಗೆ ಸಂಬಂಧಿಸಿದಂತೆ ವಿದ್ಯಾರ್ಥಿ ಪಾಲಕರಿಂದ ಇಲ್ಲವೇ ಪೋಷಕರಿಂದ ಬೇರೆ ರೀತಿಯ ಹಣ ಸಂಗ್ರಹಕ್ಕೆ ಮುಂದಾದರೆ ಇಲಾಖಾ ಶಿಸ್ತುಕ್ರಮ ಎದುರಿಸಬೇಕಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಕಿತ್ತೂರು ಕರ್ನಾಟಕ ಬೆಳಗಾವಿ ವಿಭಾಗದ ಹೆಚ್ಚುವರಿ ಆಯುಕ್ತೆ ಜಯಶ್ರೀ ಶಿಂತ್ರಿ ಎಚ್ಚರಿಸಿದ್ದಾರೆ. ಶಾಲಾ ಮಕ್ಕಳಿಗೆ ವಿತರಣೆ ಮಾಡುವ ಪ್ರತೀ…