ರಾಷ್ಟ್ರ ಪ್ರಶಸ್ತಿ ಪುರಸ್ಕೃತರು ಆದ ಹಿರಿಯ ಶಿಕ್ಷಕ ಶ್ರೀ ಪಿ ಎಸ್ ಧರೆಣಪ್ಪನವರ ಅವರನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಹಾವೀರ ಶಿಕ್ಷಣ ಸಂಸ್ಥೆಯ ವತಿಯಿಂದ ಸನ್ಮಾನ ಮಾಡಿ ಗೌರವಿಸಲಾಯಿತು
ಹುಬ್ಬಳ್ಳಿ: ರಾಷ್ಟ್ರ ಪ್ರಶಸ್ತಿ ಪುರಸ್ಕೃತರು ಆದ ಹಿರಿಯ ಶಿಕ್ಷಕ ಶ್ರೀ ಪಿ ಎಸ್ ಧರೆಣಪ್ಪನವರ ಅವರನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಹಾವೀರ ಶಿಕ್ಷಣ ಸಂಸ್ಥೆಯ ವತಿಯಿಂದ ಸನ್ಮಾನ ಮಾಡಿ ಗೌರವಿಸಲಾಯಿತು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ ಅವರು ೯೧ ವರ್ಷದ ಹಿರಿಯ ಶಿಕ್ಷಕರಾದ ಶ್ರೀ ಧರೆಣಪ್ಪನವರ ಅವರ ಶಿಕ್ಷಣ ಸೇವೆಯನ್ನು ಮತ್ತು ಜೈನ ಸಮಾಜದ ಸಂಘಟನೆ ಮತ್ತು ಅಭಿವೃದ್ಧಿಗಾಗಿ ಶ್ರಮಿಸಿದ್ದನ್ನು ನೆನಪಿಸಿಕೊಂಡರು. ಮಹಾವೀರ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಎಸ್…