ಮಕ್ಕಳಿಗೆ ಗುಣಾತ್ಮಕ ಮತ್ತು ಮೌಲ್ಯಯುತ ಶಿಕ್ಷಣ ನೀಡುವ ಮೂಲಕ ಸದೃಢ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗಬೇಕು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಧಾರವಾಡ ಕಚೇರಿಯ ಅಪರ ಆಯುಕ್ತರಾದ ಜಯಶ್ರೀ ಶಿಂತ್ರಿ ಕರೆ
ಧಾರವಾಡ : ಮಕ್ಕಳಿಗೆ ಗುಣಾತ್ಮಕ ಮತ್ತು ಮೌಲ್ಯಯುತ ಶಿಕ್ಷಣ ನೀಡುವ ಮೂಲಕ ಸದೃಢ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಧಾರವಾಡ ಕಚೇರಿಯ ಅಪರ ಆಯುಕ್ತರಾದ ಜಯಶ್ರೀ ಶಿಂತ್ರಿ ಕರೆ ನೀಡಿದರು. ಇಲ್ಲಿನ ಚನ್ನಬಸವೇಶ್ವರ ನಗರದಲ್ಲಿನ ಲಿಂಗಾಯತ ಸಭಾಭವನದಲ್ಲಿ ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಧಾರವಾಡ ತಾಲೂಕ ಶಿಕ್ಷಕರ ದಿನಾಚರಣಾ ಸಮಿತಿಯ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆ,ನಿವೃತ್ತ ಶಿಕ್ಷಕರ ಸನ್ಮಾನ, ಅತ್ಯುತ್ತಮ…