ಶಾಲೆಯಲ್ಲಿಯೇ ವಿದ್ಯಾರ್ಥಿನಿ ಮೇಲೆ ಶಿಕ್ಷಕರಿಂದ ಅತ್ಯಾಚಾರ!! ಪ್ರಾಂಶುಪಾಲ, ಇಬ್ಬರು ಶಿಕ್ಷಕರು ಸೇರಿ ನಾಲ್ವರ ಬಂಧನ..
ಶಾಲೆಯಲ್ಲಿಯೇ ವಿದ್ಯಾರ್ಥಿನಿ ಮೇಲೆ ಶಿಕ್ಷಕರಿಂದ ಅತ್ಯಾಚಾರ!! ಪ್ರಾಂಶುಪಾಲ, ಇಬ್ಬರು ಶಿಕ್ಷಕರು ಸೇರಿ ನಾಲ್ವರ ಬಂಧನ.. ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಶಾಲೆಯಲ್ಲೇ 17 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಶಾಲೆಯ ಪ್ರಾಂಶುಪಾಲ ಮತ್ತು ಇಬ್ಬರು ಶಿಕ್ಷಕರು ಸೇರಿದಂತೆ ನಾಲ್ವರನ್ನು ಮಂಗಳವಾರ ಬಂಧಿಸಲಾಗಿದೆ… ಚಿತ್ರಕೂಟ: 10ನೇ ತರಗತಿಯ ವಿದ್ಯಾರ್ಥಿನಿ ಮೇಲೆ ಕಳೆದ ಐದು ತಿಂಗಳಲ್ಲಿ ಶಾಲೆಯೊಳಗೆ ಹಲವಾರು ಬಾರಿ ಶಿಕ್ಷಕರು ಮತ್ತು ಪ್ರಾಂಶುಪಾಲರು ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ವೃಂದಾ ಶುಕ್ಲಾ ಅವರು ಹೇಳಿದ್ದಾರೆ.