ಸಿಎಮ್ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಸಿಎಸ್ ಷಡಕ್ಷರಿ ಹಾಗೂ ಮಾಜಿ ಅಧ್ಯಕ್ಷರಾದ ಎಲ್ ಬೈರಪ್ಪ ನೇತೃತ್ವದ ನಿಯೋಗ.. ಸಿಎಮ್ ಸಿದ್ದರಾಮಯ್ಯ ಕೊಟ್ಟ ಭರವಸೆ ಏನು? ಯಾವೆಲ್ಲ ವಿಷಯಗಳ ಕುರಿತು ಚರ್ಚೆ ಆಗಿದೆ.. ಈ ಕುರಿತು ಒಂದು ವರದಿ
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸಭೆ ನಡೆಸಿದ್ರು.. ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಕ್ಷರಿಯವರು ಸರ್ಕಾರಿ ನೌಕರರ ಬೇಡಿಕೆಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿಗಳ ಸಮಯವನ್ನು ಕೋರಿದ್ದು; ಇಂದು ಮಾನ್ಯ ಮುಖ್ಯಮಂತ್ರಿಗಳು ಸಮಯ ನೀಡಿದ್ದರು. ರಾಜ್ಯಾಧ್ಯಕ್ಷರಾದ ಸಿ ಎಸ್ ಷಡಾಕ್ಷರಿ ಹಾಗೂ ಮಾಜಿ ಅಧ್ಯಕ್ಷರಾದ ಎಲ್ ಬೈರಪ್ಪ ರವರು ದಿ.25-6-2024 ರಂದು ಸಂಜೆ 5.30ಕ್ಕೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರನ್ನು ಗೃಹ ಕಚೇರಿ ಕೃಷ್ಣದಲ್ಲಿ ಭೇಟಿ ಮಾಡಿ, ಏಳನೇ ವೇತನ ಆಯೋಗದ ಶಿಫಾರಸು ವರದಿಯನ್ನು…