BREAKKING NEWS: ರಾಜ್ಯ ಸರ್ಕಾರದಿಂದ 2024-25ನೇ ಸಾಲಿಗೆ ಪಠ್ಯ ಪುಸ್ತಕ ಪರಿಷ್ಕರಣೆ… 1ರಿಂದ 10ನೇ ತರಗತಿಯ ಕೆಲ ವಿಷಯಗಳ ಪಠ್ಯವನ್ನು ಪರಿಷ್ಕರಿಸಲಾಗಿದೆ
ಸದ್ದಿಲ್ಲದೇ ರಾಜ್ಯ ಸರ್ಕಾರವು 2024-25ನೇ ಸಾಲಿಗೆ ಪಠ್ಯ ಪುಸ್ತಕ ಪರಿಷ್ಕರಿಸಿದೆ. ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು-2005ರ ಮಾರ್ಗಸೂಚಿಯಂತೆ 1ರಿಂದ 10ನೇ ತರಗತಿಯ ಕೆಲ ವಿಷಯಗಳ ಪಠ್ಯವನ್ನು ಪರಿಷ್ಕರಿಸಲಾಗಿದೆ. ಮುಖ್ಯವಾಗಿ ಇತ್ತೀಚೆಗೆಷ್ಟೇ ರಾಜ್ಯ ಸರ್ಕಾರ ವಿಶ್ವಗುರು ಬಸವೇಶ್ವರರನ್ನು ಸಾಂಸ್ಕೃತಿಕ ನಾಯಕರೆಂದು ಘೋಷಣೆ ಮಾಡಿದ್ದು, ಇದನ್ನೂ ಸಹ ಪಠ್ಯದಲ್ಲಿ ಸೇರಿಸಿಲಾಗಿದೆ. ಹಾಗಾದ್ರೆ, ಏನೆಲ್ಲಾ ಬದಲಾವಣೆಯಾಗಿದೆ ಎನ್ನುವ ವಿವರ ಈ ಕೆಳಗಿನಂತಿದೆ. ಬೆಂಗಳೂರು, (ಮಾರ್ಚ್ 05): ಅಧಿಕಾರಕ್ಕೆ ಬಂದ ದಿನದಿಂದಲೇ ಶಾಲಾ ಪಠ್ಯಪುಸ್ತಕ ಪರಿಷ್ಕರಣೆಯನ್ನು(School Textbook Revision) ಗಂಭೀರವಾಗಿ ಪರಿಗಣಿಸಿದ್ದ ಕಾಂಗ್ರೆಸ್ ಸರ್ಕಾರ, ಕೊನೆಗೂ…