CLT ಪರೀಕ್ಷೆ ಪಾಸಾದ ಸರ್ಕಾರಿ ನೌಕರರಿಗೆ ಪ್ರೋತ್ಸಾಹಧನವನ್ನು ರಾಜ್ಯ ಸರ್ಕಾರ ಮಂಜೂರು ಮಾಡಿ ಆದೇಶಿಸಿದೆ.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಬಡ್ತಿ, ಮುಂಬಡ್ತಿ ಸೇರಿದಂತೆ ವೇತನ ಹೆಚ್ಚಳಕ್ಕೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ( Computer Literacy Test -CLT ) ಕಡ್ಡಾಯಗೊಳಿಸಲಾಗಿದೆ. ಈ ವರ್ಷದ ಡಿಸೆಂಬರ್ ಅಂತ್ಯದವರೆಗೆ ಉತ್ತೀರ್ಣರಾಗಲು ಅವಕಾಶ ನೀಡಲಾಗಿದೆ. ಈಗಾಗಲೇ ಉತ್ತೀರ್ಣರಾಗಿರುವಂತ ಸರ್ಕಾರಿ ನೌಕರರಿಗೆ ಪ್ರೋತ್ಸಾಹಧನವನ್ನು ರಾಜ್ಯ ಸರ್ಕಾರ ಮಂಜೂರು ಮಾಡಿ ಆದೇಶಿಸಿದೆ. ಈ ಸಂಬಂಧ ಖಜಾನೆ ಇಲಾಖೆಯಿಂದ ರಾಜ್ಯದ ಎಲ್ಲಾ ಜಿಲ್ಲಾ ಖಜಾನೆಗಳ ಪ್ರಬಾರಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ರಾಜ್ಯ ಸರ್ಕಾರಿ ಆದೇಶಗಳಲ್ಲಿ ಕರ್ನಾಟಕ ಸಿವಿಲ್ ಸೇವಾ (ಕಂಪ್ಯೂಟರ್ ಸಾಕ್ಷರತಾ…