CBSE, ICSE, ಅಂತರರಾಷ್ಟ್ರೀಯ ಮಂಡಳಿ ಸೇರಿದಂತೆ ಕೇಂದ್ರೀಯ ಪಠ್ಯಕ್ರಮದ ರಾಜ್ಯದ ಎಲ್ಲಾ ಖಾಸಗಿ ಶಾಲೆಗಳಲ್ಲಿ ಕನ್ನಡ ಕಡ್ಡಾಯ: ರಾಜ್ಯ ಸರ್ಕಾರ ಆದೇಶ..
ಬೆಂಗಳೂರು: CBSE, ICSE, ಅಂತರರಾಷ್ಟ್ರೀಯ ಮಂಡಳಿ ಸೇರಿದಂತೆ ಕೇಂದ್ರೀಯ ಪಠ್ಯಕ್ರಮದ ರಾಜ್ಯದ ಎಲ್ಲಾ ಖಾಸಗಿ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಮತ್ತು ದ್ವಿತೀಯ ಭಾಷೆಯಾಗಿ ಭೋದಿಸುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ. ನಿಯಮಗಳಿಗೆ ತಿದ್ದುಪಡಿ ತಂದು ರಾಜ್ಯ ಸರ್ಕಾರದಿಂದ ರಾಜ್ಯ ಪತ್ರ ಹೊರಡಿಸಲಾಗಿದೆ. ಈ ನಿಯಮ ಅನುಸರಿಸಿದಲ್ಲಿ ಮಾತ್ರ ಖಾಸಗಿ ಶಾಲೆಗಳನ್ನು ನಡೆಸಲು ರಾಜ್ಯ ಸರ್ಕಾರದ ನಿರಾಕ್ಷೇಪಣಾ ಪತ್ರ ದೊರೆಯಲಿದೆ ಎಂದು ಹೇಳಲಾಗಿದೆ. ಈ ಹಿಂದೆ ಕೇಂದ್ರೀಯ ಪಠ್ಯಕ್ರಮದ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಬೋಧಿಸಬೇಕೆಂಬ ನಿಯಮ…